ಶಾಂಘೈ ವರ್ಲ್ಡ್ ಸ್ಕಿಲ್-2026ನಲ್ಲಿ ಭಾಗವಹಿಸಲು ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೌಶಲ್ಯಾಭಿವೃದ್ಧಿ ನಿಗಮದ ಸ್ಪರ್ಧೆಯಲ್ಲಿ ವಿಜೇತರಾದ ರಾಜ್ಯದ ಯುವಜನರಿಗೆ ಜ್ಞಾನಾರ್ಜನೆಗೆ ಸೂಕ್ತ ವೇದಿಕೆ ಕಲ್ಪಿಸಿ, ಚೀನಾದ ಶಾಂಘೈನಲ್ಲಿ ಜರುಗಲಿರುವ ವಲ್ರ್ಡ್ ಸ್ಕಿಲ್-2026 ನಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶ ಕಲ್ಪಿಸಲಾಗುತ್ತಿದೆ.

ಇದಕ್ಕಾಗಿ 2025-26ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್-2025 ಸ್ಪರ್ಧಾ ಕಾರ್ಯಕ್ರಮವನ್ನು ಜಿಲ್ಲಾ, ವಲಯ ಹಾಗೂ ರಾಜ್ಯ ಮಟ್ಟದಲ್ಲಿ ಆಯೋಜಿಸಲಾಗುವುದು. ಸ್ಪರ್ಧೆ ವಿಜೇತರಾದವರನ್ನು ಗುರುತಿಸಿ ದಕ್ಷಿಣ ಪ್ರಾದೇಶಿಕ ಹಂತಕ್ಕೆ ಆಯ್ಕೆ ಮಾಡಲಾಗುವುದು. ಇವರಿಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಪ್ರೇರೆಪಿಸಲಾಗುವುದು.

- Advertisement - 

ಯುವಜನತೆ ಸೆ.30ರ ಒಳಗೆ www.skillindiadigital.gov.in    ಪೋರ್ಟಲ್‍ನಲ್ಲಿ ಉಚಿತವಾಗಿ ನೊಂದಾಯಿಸಿಕೊಂಡು ತರಬೇತಿ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

 

- Advertisement - 

 

 

Share This Article
error: Content is protected !!
";