ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಯುವ ಘಟಕದರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮದ್ದೂರಿನಲ್ಲಿ ನಡೆದ ಲಾಠಿಚಾರ್ಜ್ ಗೆ ಖಂಡಿಸಿದರು. ಸೋಮವಾರ ಮಧ್ಯಾಹ್ನ ಮದ್ದೂರು ನಗರಕ್ಕೆ ಭೇಟಿ ನೀಡಿ ಅವರು ಪರಿಶೀಲಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರೇ ಗಾಯಗೊಂಡಿರುವುದು ಕಾನೂನು-ಸುವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಕುಸಿದಿರುವುದನ್ನು ತೋರಿಸುತ್ತದೆ.
ಈ ಘಟನೆಯಲ್ಲಿ ಮಹಿಳೆಯರ ಮೇಲೆ ಕೂಡ ಪೊಲೀಸರು ಲಾಠಿಚಾರ್ಜ್ ಮಾಡಿರುವುದು ನಿಜಕ್ಕೂ ಖಂಡನೀಯ. ಅಸಮರ್ಥ ಗೃಹ ಮತ್ತು ಉಸ್ತುವಾರಿ ಸಚಿವರು ಈ ಕೂಡಲೇ ರಾಜೀನಾಮೆ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

