ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ ಎಂದು ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ:
ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

