ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಂತವಾಗಿದ್ದ ಮದ್ದೂರಲ್ಲಿ ಕಿಡಿಗೇಡಿಗಳು ದ್ವೇಷದ ಕಿಡಿ ಹೊತ್ತಿಸಿದ್ದಾರೆ.
ಸೆಪ್ಟೆಂಬರ್-08 ರಾತ್ರಿ ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ಸಮಯದಲ್ಲಿ ಕಲ್ಲು ತೂರಾಟ ಮಾಡಿ ಕಿಡಿಗೇಡಿಗಳ ದುಷ್ಕೃತ್ಯದಿಂದ ಇಡೀ ಪಟ್ಟಣವೇ ಉದ್ವಿಗ್ನಗೊಂಡಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಫ್ರೀ ಪ್ಲಾನ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.
ಈ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ, ಜೆಡಿಎಸ್ ನಾಯರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿ ಕೇಳಿಬಂದಿದ್ದು, ಇದರ ಮಧ್ಯೆ ಗೃಹ ಸಚಿವ ಪರೇಶ್ವರ್ ಪ್ರತಿಕ್ರಿಯಿಸಿ, ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.
ಈ ಮೂಲಕ ಈ ಕಲ್ಲು ತೂರಾಟ ಪ್ರೀ ಪ್ಲ್ಯಾನ್ ಎಂದು ಸ್ಥಳೀಯರು ಆರೋಪಿಸಿದ್ದು, ಇದೀಗ ಗೃಹ ಸಚಿವರು ಸಹ ಇದು ಪೂರ್ವ ನಿಯೋಜಿತ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ. ಪ್ರಕರಣ ಸಂಬಂಧ ಇಂದು(ಸೆಪ್ಟೆಂಬರ್ 08) ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಹಿಂದೂ ಸಂಘಟನೆ ಕಾರ್ಯಕರ್ತರು ಮೆರವಣಿಗೆ ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಸೂಚಿಸಲಾಗಿದ್ದು, ಪೊಲೀಸರು ಶಾಂತಿ ಕಾಪಾಡುವ ಕೆಲಸ ಮಾಡುತ್ತಾರೆ. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ. ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಅನ್ನೋ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.
ಸಿಎಂ ಹೇಳಿಕೆ-
ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಗುಂಪು ಕಟ್ಟಿಕೊಂಡು ಗಲಾಟೆ ಮಾಡಲು ಶುರು ಮಾಡಿದ್ದಾರೆ. ಹಾಗಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಕಲ್ಲು ತೂರಾಟ ಕೇಸ್ ನಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಆಗಲಿ, ಮುಸ್ಲಿಂ ಆಗಲಿ ಯಾರೇ ತಪ್ಪು ಮಾಡಿದರೂ ಕ್ರಮವಾಗುತ್ತೆ ಎಮದು ತಿಳಿಸಿದರು.
ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಗಲಾಟೆಗಳು ಎಲ್ಲೂ ನಡೆದಿಲ್ಲ. ಮದ್ದೂರಿನಲ್ಲಿ ಮಾತ್ರ ನಡೆದಿದೆ. ಈ ವರ್ಷ ನಾಗಮಂಗಲದಲ್ಲಿ ಆಗಿಲ್ಲ. ಇದು ರಾಜಕೀಯ ಪಕ್ಷದ ಕೆಲಸ ಅಲ್ಲ. ಎಲ್ಲೆಲ್ಲಿ ಗಲಾಟೆ ಆಗಿದೆ? ಎಂದು ಪ್ರಶ್ನಿಸಿದ ಸಿಎಂ, ಸಮಾಜದಲ್ಲಿ ನೆಮ್ಮದಿಕೆಡಿಸಿದ್ದೇ ಬಿಜೆಪಿರುವರು ಎಂದು ಟಾಂಗ್ ಕೊಟ್ಟರು.
ಎಡಿಜಿಪಿ ಹೇಳಿಕೆ-
ಪ್ರಕರಣ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಅವರು ಪ್ರತಿಕ್ರಿಯಿಸಿ,ರಾಜ್ಯದಲ್ಲಿ ಈಗಾಗಲೇ 77 ಸಾವಿರ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ 74 ಸಾವಿರ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗಿದೆ. ಮದ್ದೂರು ಪಟ್ಟಣದಲ್ಲಿ ಮಸೀದಿ ಮುಂದೆ ಮೆರವಣಿಗೆ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ಆರೋಪ ಬಂದಿದೆ. ಪೊಲೀಸರು ಈಗಾಗಲೇ ನಿಯಂತ್ರಣ ಮಾಡಿದ್ದಾರೆ. 14 ಹೆಚ್ಚು ಜನರನ್ನ ಈಗಾಗಲೇ ಬಂಧಿಸಲಾಗಿದೆ. ಆರು ಜನರ ಬಂಧನ ಪ್ರಕ್ರಿಯೆ ನಡೆಯುತ್ತಿದೆ.
ಇವತ್ತು ಮೆರವಣಿಗೆ ಮೇಲೆ ಕಾರ್ಯಕರ್ತರು ಇನ್ನೊಂದು ಧರ್ಮದ ಧಾರ್ಮಿಕ ಸ್ಥಳಕ್ಕೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಲಾಠಿಚಾರ್ಜ್ ಮಾಡಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.
ಇದೇ ರೀತಿ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಪೊಲೀಸರು ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದ್ರೆ ಕ್ರಮ. ಮದ್ದೂರು ಪಟ್ಟಣದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇದರ ಹಿಂದೆ ಯಾರಿದ್ದರೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

