ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿ ಉದ್ದೇಶ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು
, ನಾವು ಯಾವುದೇ ಜಾತಿ – ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಪಾದಯಾತ್ರೆ ಕೈಗೊಂಡಿದ್ದಾರೆ. ಪರಿಸ್ಥಿತಿ ಮತ್ತಷ್ಟು ಹದಗೆಡುವಂತೆ ಮಾಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದ ಆರ್ ಎಸ್ ಎಸ್ ಸಂಘಟನೆಯವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ.

- Advertisement - 

ಗಲಭೆಯಲ್ಲಿ ನಿರತರಾಗಿದ್ದವರು ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಬಗ್ಗೆ ಗಮನಕ್ಕೆ ಬಂದಿದೆ. ಕೇಂದ್ರದ ವಿರುದ್ಧ ನಡೆದ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡರು. ಆಗ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ? ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

 

- Advertisement - 

 

 

 

Share This Article
error: Content is protected !!
";