ಪಾಕಿಸ್ತಾನ್ ಜಿಂದಾಬಾದ್ ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾಕಿಸ್ತಾನ್ ಜಿಂದಾಬಾದ್ಕೂಗಿಸುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿರುವಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.

ವಿಧಾನಸೌಧದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ಕೂಗಿದ ಕಾಂಗ್ರೆಸ್ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿ ದುಷ್ಕರ್ಮಿಗಳು ಈಗ ರಸ್ತೆ-ರಸ್ತೆಗಳಲ್ಲಿ ದೇಶದ್ರೋಹಿ ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ. ಇದೆ ನಿಟ್ಟಿನಲ್ಲಿ ನೆನ್ನೆ ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲೂ ಪಾಕಿಸ್ತಾನ್ ಜಿಂದಾಬಾದ್ಕೂಗಿರುವ ಘಟನೆ ಕಡು ದೇಶದ್ರೋಹ ಕೃತ್ಯವಾಗಿದೆ. 

- Advertisement - 

ಧರ್ಮಸ್ಥಳವಾಯಿತು, ಸಾಂಪ್ರದಾಯಿಕ ದಸರಾ ಉತ್ಸವಕ್ಕೆ ಕಳಂಕ ಹಚ್ಚಲು ನಿರ್ಧರಿಸಲಾಯಿತು, ಮದ್ದೂರು ಹಾಗೂ ರಾಜ್ಯದ ಇತರೆಡೆಗಳಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಿಸಿ ಕರ್ನಾಟಕದ ಶಾಂತಿ ಹದಗೆಡಿಸಲು ಹೊರಟಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.

ಕರ್ನಾಟಕವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಏನು ಮಾಡಲು ಹೊರಟಿದೆ? ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಿದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕರ್ನಾಟಕ ಬಿಜೆಪಿ ಆಗ್ರಹಪಡಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.

- Advertisement - 

 

 

Share This Article
error: Content is protected !!
";