ಮದ್ದೂರಿಗೆ ಭೇಟಿ ನೀಡಿದ ಬಿಜೆಪಿ ನಿಯೋಗ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲೆಯ ಮದ್ದೂರಿಗೆ ಭೇಟಿ ನೀಡಿರುವ ಬಿಜೆಪಿ ತಂಡ, ಭಾನುವಾರ ರಾತ್ರಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಅನ್ಯಕೋಮಿನ ಮತಾಂಧ ಕಿಡಿಗೆಗಳಿಂದ ನಡೆದ ಕಲ್ಲು ತೂರಾಟ, ಕೋಮು ದಳ್ಳುರಿ ಹಾಗೂ ಪ್ರತಿಭಟನಾ ನಿರತ ಹಿಂದೂ ಭಕ್ತಾದಿಗಳ ಮೇಲೆ ನಡೆದ ಲಾಠಿಚಾರ್ಜ್ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಚರ್ಚಿಸಿ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಯಿತು.

ಕಳೆದ ವರ್ಷ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆಯ ನಂತರವೂ ಎಚ್ಚೆತ್ತಿಕೊಳ್ಳದೆ ಹಿಂದೂ ಧಾರ್ಮಿಕ ಆಚರಣೆಗಳ ವೇಳೆ ಸೂಕ್ತ ಭದ್ರತೆ ನೀಡಿ ಕಾನೂನು, ಸುವ್ಯವಸ್ಥೆ, ಶಾಂತಿ ಕಾಪಾಡುವಲ್ಲಿ ಪೊಲೀಸರು ವಿಫಲವಾಗಿದ್ದು, ಈ ಘಟನೆಯ ಬಗ್ಗೆ ಈವರೆಗೂ ನಡೆದಿರುವ ತನಿಖೆಯ ಬಗ್ಗೆ ಮಾಹಿತಿ ಪಡೆಯಲಾಯಿತು. ತನಿಖೆಯಲ್ಲಿ ಯಾವುದೇ ರಾಜಕೀಯ ಒತ್ತಡಗಳಿಗೆ ಒಳಗಾಗದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಲಾಯಿತು.

- Advertisement - 

ಈ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಮುಂದಿನ ವರ್ಷ ಸಾಮೂಹಿಕ ಗಣೇಶೋತ್ಸವವನ್ನ ಸಂಪೂರ್ಣವಾಗಿ ಬ್ಯಾನ್ ಮಾಡಿದರೂ ಅಚ್ಚರಿಯಿಲ್ಲ.

ಕಲ್ಲು ಹೊಡೆದವರಿಗೆ ರಕ್ಷಣೆಯ ಭರವಸೆ, ಕಲ್ಲು ಹೊಡೆಸಿಕೊಂಡವರಿಗೆ ಪೊಲೀಸು, ಕೇಸು, ಕೋರ್ಟು ಕಚೇರಿ ಎಂಬ ಚಿತ್ರಹಿಂಸೆ.

- Advertisement - 

ಹಿಂದೂಗಳಿಗೆ ಎಲ್ಲಿದೆ ಸ್ವಾಮಿ ನ್ಯಾಯದ ಗ್ಯಾರೆಂಟಿ? ಕಾಂಗ್ರೆಸ್ ಪಕ್ಷಕ್ಕೆ ಓಟು ಹಾಕಿದ ತಪ್ಪಿಗೆ ಹಿಂದೂಗಳು ಇನ್ನೆಷ್ಟು ಪಶ್ಚಾತಾಪ ಪಡಬೇಕು? ಎಂದು ಅಶೋಕ್ ತಾಕೀತು ಮಾಡಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಸಿ.ಟಿ ರವಿ, ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರಾಜ್ ಮುನಿರಾಜ್, ಸಂಸದರಾದ ಯಧುವೀರ್ ಒಡೆಯರ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಎಂ ಕೃಷ್ಣಪ್ಪ, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಕುಮಾರ್, ಮುಖಂಡರಾದ ಎಸ್.ಪಿ.ಸ್ವಾಮಿ, ಇಂಡವಾಳು ಸಚ್ಚಿದಾನಂದ್ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

 

Share This Article
error: Content is protected !!
";