ಗ್ರೂಪ್ ಸಿ ಹುದ್ದೆಗಳ ನೇಮಕಾತಿ ದಾಖಲೆಗಳ ಪರಿಶೀಲನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದಿಂದ 2024 ನೇ ಮಾರ್ಚ್ 15 ರಂದು ಅಧಿಸೂಚಿಸಲಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಉಳಿಕೆ ಮೂಲವೃಂದದ 150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲದಾಖಲೆಗಳ ಪರಿಶೀಲನೆಯನ್ನು 2025 ನೇ ಸೆಪ್ಟೆಂಬರ್ 24 ರಿಂದ 26 ರವರೆಗೆ ಬೆಂಗಳೂರಿನ  ಆಯೋಗದ ಕೇಂದ್ರ ಕಚೇರಿಯಲ್ಲಿ ನಡೆಸಲಾಗುವುದು.

- Advertisement - 

ನೇಮಕಾತಿಯ ಮೂಲದಾಖಲೆಗಳ ಪರಿಶೀಲನಾ ವೇಳಾಪಟ್ಟಿಯನ್ನು ಆಯೋಗದ ವೆಬ್ಸೈಟ್ http://kpsc.kar.nic.in  ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ವಿಶಾಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";