ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಶಂಕರ್ ಮಠ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಹಾಗೂ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ ಎಂದು ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಡಿ. ನಾರಾಯಣ ರೆಡ್ಡಿ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಬೆಳಿಗ್ಗೆ 9 ಗಂಟೆಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೆರಿಸಿ, ಟ್ರಾಕ್ಟರ್ ನಲ್ಲಿ ವಿಘ್ನೇಶ್ವರನನ್ನು ಕೂರಿಸಿ ಮುಖ್ಯ ರಸ್ತೆಯ ಬಿಇಒ ಕಚೇರಿ ಸಮೀಪ ಕರೆತರಲಾಗುವುದು. ಬಳಿಕ ಬೆಳಿಗ್ಗೆ 11 ಗಂಟೆಗೆ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ನಂತರ ಶೋಭಾಯಾತ್ರೆ ಆರಂಭವಾಗಲಿದೆ. ಈ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಹಾಗೂ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮದಲ್ಲಿ ವಿವಿಧ ಆಕರ್ಷಕ ಕಲಾ ತಂಡಗಳು ಭಾಗವಹಿಸಲಿವೆ.
ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಮಿತಿ ಅಧ್ಯಕ್ಷ ಡಿ ನಾರಾಯಣ ರೆಡ್ಡಿ ಅವರು ಮನವಿ ಮಾಡಿದ್ದಾರೆ.

