ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಟ ಪ್ರಥಮ್ ಗೆ ಧಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ ಎಂಬ ಪ್ರಕರಣದಲ್ಲಿ ರೌಡಿಶೀಟರ್ ಬೇಕರಿ ರಘುನನ್ನು ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಕಾರಣ ನೀಡಿ ನ್ಯಾಯಾಂಗ ಬಂಧನ ಮಾಡಲಾಗಿದೆ.
ಪ್ರಥಮ್‌ಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಳೆದ ತಿಂಗಳು ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ಗೆ ಹಾಜರಾಗಿ ಬಂಧನಕ್ಕೂ ಮುನ್ನವೇ ಜಾಮೀನು ಪಡೆದುಕೊಂಡಿದ್ದ ರಘು ಸದ್ಯ ಪ್ರಕರಣ ಸಂಬಂಧ ರಘುವನ್ನು ನ್ಯಾಯಾಲಯದ ಆದೇಶದ ಮೇರೆಗೆ ಬಂಧಿಸಲಾಗಿದೆ.
ಪ್ರತಿ ಭಾನುವಾರ ಠಾಣೆಗೆ ಬಂದು ಸಹಿ ಹಾಕಲು ರಘುಗೆ ಸೂಚನೆ ನೀಡಲಾಗಿತ್ತು. ನ್ಯಾಯಾಲಯ ವಿಧಿಸಿದ ಷರತ್ತುಗಳ ಉಲ್ಲಂಘನೆ ಮಾಡಿದ ಕಾರಣ ನೀಡಿ ದೊಡ್ಡಬಳ್ಳಾಪುರ ಸಿವಿಲ್ ಕೋರ್ಟ್‌ನಿಂದ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

