ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಖಂಡಿಸಿ ಬೃಹತ್ ಪ್ರತಿಭಟನೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮದ್ದೂರು
, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ  ಗಣೇಶ ವಿಸರ್ಜನೆ ಹಾಗೂ ಶೋಭಾಯಾತ್ರೆಯ ಮೇಲೆ ಕಲ್ಲುತೂರಾಟ ಮಾಡಿರುವ ಘಟನೆ ಸಂಭವಿಸಿದ್ದು  ಅಂತಹ ಕೃತ್ಯಕ್ಕೆ ಮುಂದಾದ ಕಿಡಿಗೇಡಿಗಳ ವಿರುದ್ಧ  ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ವಿಭಾಗ ಸಂಯೋಜಕ ನರೇಶ್ ರೆಡ್ಡಿ ಆಗ್ರಹಿಸಿದರು. 

ಮದ್ದೂರಿನ ಗಣೇಶ ವಿಸರ್ಜನೆ ಸಮಯದಲ್ಲಿ ನೆಡೆದಿರುವ ಕಲ್ಲು ತೂರಾಟದ ವಿರುದ್ಧ ಹಾಗೂ ರಾಜ್ಯಾದ್ಯಂತ ಗಣೇಶ  ವಿಸರ್ಜನೆಗೆ ತಡೆ ಒಡ್ಡುತ್ತಿರುವುದು ಮತ್ತು ಪ್ರಾಂತ್ಯದ ಅನೇಕ ಅಧಿಕಾರಿಗಳನ್ನು ವಿವಿಧ ಜಿಲ್ಲೆಗಳ ಪ್ರವೇಶಕ್ಕೆ ನಿಷೇದ ಒಡ್ಡುತ್ತಿರುವುದನ್ನು ಖಂಡಿಸಿ ನಗರದ ತಾಲ್ಲೂಕು ಕಛೇರಿ ಮುಂಭಾಗ ವಿಶ್ವ ಹಿಂದೂ ಪರಿಷತ್,ಮತ್ತು ಬಜರಂಗದಳದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು  ನಮ್ಮ ದೇಶದ ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಲು ದೇಶಭಕ್ತರನ್ನು ಸಂಘಟಿಸಲು ಬಾಲಗಂಗಾಧರ್ ತಿಲಕ್ ಅವರು ಗಣೇಶ ಹಬ್ಬವನ್ನು ಸಾರ್ವಜನಿಕ ಹಬ್ಬವನ್ನಾಗಿ ಪರಿವರ್ತಿಸಿದರು. ಅಂದಿನಿಂದ ಇಂದಿನವರೆಗೂ ಗಣೇಶೋತ್ಸವವು ಸಾರ್ವಜನಿಕ ಸ್ಥಳದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

- Advertisement - 

ಆದರೆ ಈ ಬಾರಿ ಗಣೇಶ ಉತ್ಸವ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ವಿಘ್ನ ವಿನಾಶಕನ ಉತ್ಸವಕ್ಕೆ ರಾಜ್ಯ ಸರ್ಕಾರವು ನಿಯಮಗಳ ಕಾರಣ ನೀಡಿ ಅನೇಕ ರೀತಿಯ ವಿಘ್ನಗಳನ್ನು, ಗಣೇಶನ ಭಕ್ತರ ಮೇಲೆ ಹೇರುತ್ತಿದೆ. ಈ ಉತ್ಸವದಲ್ಲಿ ಭಾಗವಹಿಸಲು ವಿಶ್ವ ಹಿಂದೂ ಪರಿಷತ್ತಿನ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಲವು ಕಡೆ ಧ್ವನಿ ವರ್ಧಕಗಳನ್ನು ಬಳಸಲು ನಿಷೇಧ ಹೇರಿದೆ.

ನಮ್ಮ ರಾಜ್ಯದಲ್ಲಿ ಮದ್ದೂರು, ಸಾಗರ ಸೇರಿದಂತೆ ಅನೇಕ ಸ್ಥಳಗಳಲ್ಲಿ ಗಣೇಶ ಶೋಭಯಾತ್ರೆ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಮೆರವಣಿಗೆ ಗಳ ಮೇಲೆ ಕಲ್ಲು ತೂರಾಟ ನಡೆಯುತ್ತಿದೆ. ಇವರ ಮೇಲೆ ರಾಜ್ಯ ಪೊಲೀಸರು ಯಾವುದೇ ಬಲವಾದ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ. ಕಲ್ಲುತೂರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಮತ್ತು ಕಲ್ಲು ತೂರುವ ಸ್ಥಳಗಳ ಮೇಲೆ ಡೋನ್ ಕ್ಯಾಮೆರಾ ಅಳವಡಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ನಾಳೆಯಿಂದ ಜಿಲ್ಲಾ ಮಟ್ಟದ ಪ್ರತಿಭಟನಾ ಸಭೆ ನಡೆಸಿ ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆಗ್ರಹ ಪತ್ರ ನೀಡಲು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನಿರ್ಧರಿಸಿದೆ ಎಂದರು.

- Advertisement - 

ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ರವಿ ಕುಮಾರ್ವಿಶ್ವ ಹಿಂದೂ ಪರಿಷತ್ ಜಿಲ್ಲಾ ಗೋರಕ್ಷಾ ಪ್ರಮುಖ್ ಗಂಗಾಧರ್, ಭಜರಂಗದಳ ತಾಲೂಕು ಸಂಯೋಜಕ ವಿರಾಜ್, ತಾಲೂಕು ಕಾರ್ಯದರ್ಶಿ ಉಮೇಶ್ ಸೇರಿದಂತೆ ಹಿಂದೂ ಪರ ಸಂಘಟನೆಯ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

 

 

 

Share This Article
error: Content is protected !!
";