ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತಂತೆ ಶುಕ್ರವಾರ ವಿಡಿಯೋ ಸಂವಾದ ಸಭೆ ನಡೆಸಿ ಮಾರ್ಗಸೂಚಿಗಳನ್ವಯ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಕುರಿತಂತೆ ಸೂಕ್ತ ರೀತಿಯಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ, ವಿಶೇಷ ಭೂಸ್ವಾಧಿನಾಧಿಕಾರಿ ವೆಂಕಟೇಶ ನಾಯ್ಕ್,
ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ಅಂಗವಿಕರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಚುನಾವಣೆ ಶಾಖೆ ಮಲ್ಲಿಕಾರ್ಜುನ ನಾಯ್ಕ್ ಸೇರಿದಂತೆ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ವೀಡಿಯೋ ಸಂವಾದ ಸಭೆಯಲ್ಲಿ ಭಾಗವಹಿಸಿದ್ದರು.

