ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಸಮೀಪದಲ್ಲಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿರುವ ಘಟನೆ ಜರುಗಿದೆ.
ಸಿಎಂ ನಿವಾಸದ ಸಮೀಪ ನಿಲುಗಡೆ ಮಾಡಲಾಗಿದ್ದ ಕಾರು ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿತು. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರಲ್ಲದೆ ಪರಿಸ್ಥಿತಿಯನ್ನ ನಿಯಂತ್ರಿಸಿದ್ದಾರೆ. ಬೆಂಕಿ ಬಿದ್ದ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

