ಚಂದ್ರವಳ್ಳಿ ನ್ಯೂಸ್, ರಾಯಚೂರು:
ಸರ್ಕಾರಿ ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ಕಲ್ಯಾಣ ಕರ್ನಾಟದ ರಾಯಚೂರಿನಲ್ಲಿ ಬೆಳಕಿಗೆ ಬಂದಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ಜರುಗಿದೆ.
ಆಸ್ಪತ್ರೆಯ ಸೌರ ಘಟಕಗಳು, ಜನರೇಟರ್ ಕೆಟ್ಟು ಹೋಗಿದ್ದರಿಂದ ರಾತ್ರಿ ವೇಳೆ ಆಗಮಿಸಿದ ಮಹಿಳೆಗೆ ಮೊಂಬತ್ತಿ ಹಾಗೂ ಮೊಬೈಲ್ ಟಾರ್ಚ್ ಮೂಲಕವೇ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ, ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಿರುವ ವಿಡಿಯೋ ವೈರಲ್ ಆಗಿದ್ದು ಸರ್ಕಾರದ ವ್ಯವಸ್ಥೆಗೆ ಆಕ್ರೋಶ ವ್ಯಕ್ತವಾಗಿದೆ.

