ನಿವೃತ್ತ ಎಸಿಪಿಗೆ ಚಾಕು ಇರಿದು ದರೋಡೆ ಮಾಡಿದ್ದ ಮೂವರು ಕಳ್ಳರ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಂದಿನಂತೆ ಬೆಳಿಗ್ಗೆ ವಾಕಿಂಗ್‌ಮುಗಿಸಿ ಮನೆಗೆ ತೆರಳುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್‌ಲೆಟ್ ಕಿತ್ತುಕೊಂಡು ದರೋಡೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ ಹಳ್ಳಿ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್(30), ಮೊಹಮ್ಮದ್ ಸಲ್ಮಾನ್(20) ಹಾಗೂ ಸೈಯ್ಯದ್ ಇರ್ಫಾನ್ (23) ಬಂಧಿತ ಆರೋಪಿಗಳು.

- Advertisement - 

ಬೆಂಗಳೂರಿನ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಬಳಿ ಕೆಲ ದಿನಗಳ ಹಿಂದೆ ಹಾಡಹಗಲೇ ನಿವೃತ್ತ ಎಸಿಪಿ ಹೆಚ್.ಸುಬ್ಬಣ್ಣ ಅವರ ಮೇಲೆ ಚಾಕುವಿನಿಂದ ಹಲ್ಲೆಗೈದಿದ್ದ ಆರೋಪಿಗಳು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಸ್ಕ್ ಧರಿಸಿದ್ದ ಕಳ್ಳರು:

ನಿವೃತ್ತ ಎಸಿಪಿ ಅವರು ಎಂದಿನಂತೆ ವಾಕಿಂಗ್‌ಮುಗಿಸಿ ಬೆಳಿಗ್ಗೆ 9:30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ಸುಬ್ಬಣ್ಣ ಅವರನ್ನು ಮಾಸ್ಕ್ ಧರಿಸಿ ಬಂದಿದ್ದ ಆರೋಪಿಗಳು ಅಡ್ಡಗಟ್ಟಿ ಚಾಕು ತೋರಿಸಿ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದರು.

- Advertisement - 

ಕಳ್ಳರ ಕೃತ್ಯಕ್ಕೆ ಪ್ರತಿರೋಧಯೊಡ್ಡಲು ಮುಂದಾದ ಸುಬ್ವಣ್ಣ ಅವರ ಕೈಗೆ ಚಾಕುವಿನಿಂದ ಹಲ್ಲೆ ಮಾಡಿ, ಕೈಯಲ್ಲಿದ್ದ ಚಿನ್ನದ ಬ್ರೇಸ್‌ಲೆಟ್ ಸಹ ಕಿತ್ತುಕೊಂಡು ಪರಾರಿಯಾಗಿದ್ದರು. ಬಳಿಕ ಸುಬ್ಬಣ್ಣ ಅವರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಅದರ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

 

 

 

Share This Article
error: Content is protected !!
";