ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ದಿಗ್ಗಜ ಕಲಾವಿದರಾದ ಡಾ. ವಿಷ್ಣುವರ್ಧನ್ ಹಾಗೂ ಡಾ. ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ಮರಣೋತ್ತರವಾಗಿ ‘ಕರ್ನಾಟಕ ರತ್ನ‘ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಶುಕ್ರವಾರ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶೃತಿ ಹಾಗೂ ಮಾಳವಿಕಾ ಅವಿನಾಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದರಾದ ವಿಷ್ಣುವರ್ಧನ್ ಮತ್ತು ಬಿ.ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಗೌರವ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬೆನ್ನಲ್ಲೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಇವರು ಸಿಎಂ, ಡಿಸಿಎಂ ಭೇಟಿಯಾಗಿ ಮನವಿ ಸಲ್ಲಿಸಿ ಒತ್ತಾಯಿಸಿದ್ದರು.
ಡಿಸಿಎಂ ಎಕ್ಸ್ ಪೋಸ್ಟ್:
ಕನ್ನಡ ಸಿನೆಮಾ ನಟಿಯರ ಭೇಟಿ ಬೆನ್ನಲ್ಲೇ ಎಕ್ಸ್ (ಟ್ವೀಟ್) ಪೋಸ್ಟ್ ಹಂಚಿಕೊಂಡ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಕನ್ನಡ ಚಿತ್ರರಂಗದ ದಿಗ್ಗಜ ಕಲಾವಿದರಾದ ಡಾ.ವಿಷ್ಣುವರ್ಧನ್ ಹಾಗೂ ಡಾ.ಬಿ.ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರವು ಮರಣೋತ್ತರವಾಗಿ ‘ಕರ್ನಾಟಕ ರತ್ನ‘ ಪ್ರಶಸ್ತಿ ಘೋಷಿಸಿರುವ ಹಿನ್ನೆಲೆಯಲ್ಲಿ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವಿನಾಶ್ ಅವರು ನನ್ನನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿದರು ಎಂದು ಬರೆದುಕೊಂಡಿದ್ದಾರೆ.
ಕಲಾವಿದರಿಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ ಬಳಿಕ ಪೋಸ್ಟ್ ಶೇರ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿರುವ ಮೇರು ನಟ, ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಹಾಗೂ ಚಂದನವನದ ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

