ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಚಿವರು ಹಾಗೂ ಶಾಸಕರಾದ ಕೆ. ಗೋಪಾಲಯ್ಯ ಅವರು ತಮ್ಮ ಕುಟುಂಬ ಸಮೇತರಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ನವದೆಹಲಿಯ ಗೃಹ ಕಚೇರಿಯಲ್ಲಿ ವಿಶ್ವಾಸ ಪೂರ್ವಕವಾಗಿ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಗೋಪಾಲಯ್ಯ, ಪತ್ನಿ ಮಕ್ಕಳು, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕುಮಾರಸ್ವಾಮಿ ಅವರೊಟ್ಟಿಗೆ ಕೂತು ಮಾತುಕತೆ ಮಾಡಿದರು.

