ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ 9 ಮಂದಿ ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದ್ದಾರೆ.
ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.
ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ.
ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

