ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

- Advertisement - 

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";