ಮೋದಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಮಣಿಪುರದಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಪ್ರಧಾನಿಗಳು ಭೇಟಿನೀಡಿ, ಜನರ ಕಷ್ಟ ಆಲಿಸಬೇಕಿತ್ತು. ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡುತ್ತಿದ್ದಾರೆ. ವಿರೋಧಪಕ್ಷದವರ ಒತ್ತಡದಿಂದ ಈಗ ಮಣಿಪುರಕ್ಕೆ ಹೋಗಿದ್ದಾರೆ ಎಂದು ಸಿಎಂ ಆರೋಪಿಸಿದರು.

- Advertisement - 

ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿಯವರು ಪ್ರಚೋದನಾಕಾರಿಯಾದ ಭಾಷಣ ಮಾಡಿದರೆ ಸರ್ಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ? ಸಮಾಜದ ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ.

ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದು ರಾಜಕಾರಣವಲ್ಲ. ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ಮಾಡುವುದು ಇಲ್ಲ. ನಾನೂ ಕೂಡ ಒಬ್ಬ ಹಿಂದೂ. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ ಎಂದು ಮುಖ್ಯಮಂತ್ರಿಗಳು ಟಾಂಗ್ ನೀಡಿದ್ದಾರೆ.

- Advertisement - 

Share This Article
error: Content is protected !!
";