ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಪಘಾತ ಸಂದರ್ಭದಲ್ಲಿ ಮೃತರ ಕುಟುಂಬದವರಿಗೆ ಸರ್ಕಾರ ಪರಿಹಾರ ನೀಡುವುದು ಸಾವಿನ ನಷ್ಟಕ್ಕೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು, ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಆರಂಭಿಕ ದಿನಗಳಲ್ಲಿ ಆರ್ಥಿಕ ಸಂಕಷ್ಟಗಳು ಬಾಧಿಸದಿರಲಿ ಎಂಬ ಉದ್ದೇಶದಿಂದ ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರ ರಸ್ತೆ ಸುರಕ್ಷತಾ ಕಾನೂನುಗಳನ್ನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ?
ಹಾಸನ ಉಸ್ತುವಾರಿ ಸಚಿವರಾದ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ, ಸಂತೈಸಿ, ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ. ಮೃತರ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಪರಿಹಾರ ನೀಡಲಾಗುತ್ತಿದೆ.
ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಾರ್ಥಿಸಿದ್ದಾರೆ.

