ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕ್ಯಾಂಟರ್ ಲಾರಿ ನುಗ್ಗಿ ಸಂಭವಿಸಿದ ದಾರುಣ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ 20ಕ್ಕೂ ಹೆಚ್ಚು ಜನ ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ತೀವ್ರ ಆಘಾತ ಉಂಟುಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಮೃತರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ರಾಜ್ಯ ಸರ್ಕಾರ, ಜಿಲ್ಲಾಡಳಿತ ಈ ಕೂಡಲೇ ಗಾಯಗೊಂಡವರ ಚಿಕಿತ್ಸೆಗೆ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿಬೇಕು ಎಂದು ಆಗ್ರಹಿಸುತ್ತೇನೆ.
ಹಾಸನ ಜಿಲ್ಲೆಯ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಡಿ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡಿರುವವರಿಗೆ ತಲಾ 50,000 ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಶೋಕ್ ಧನ್ಯವಾದಗಳನ್ನು ತಿಳಿಸಿದ್ದಾರೆ.

