ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ “ನನ್ನ ಮತ ನನ್ನ ಹಕ್ಕು” ಎಂಬ ಧ್ಯೇಯ ವಾಕ್ಯದಡಿ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು.
ಚಿತ್ರದುರ್ಗ ದಿಂದ ಬೆಂಗಳೂರುವರೆಗೆ ಬೈಕ್ ರ‍್ಯಾಲಿ ಆಯೋಜಿಸಿದ್ದು, ಅನುಭವಿತ ಹತ್ತು ದ್ವಿಚಕ್ರ ವಾಹನ ಸವಾರರು ಭಾನುವಾರ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರವು ಕಳೆದ ವರ್ಷ ಬೀದರ್‌ನಿಂದ ಚಾಮರಾಜನಗರದವರೆಗೂ ಮಾನವ ಸರಪಳಿ ನಿರ್ಮಿಸುವ ಮೂಲಕ ಇತಿಹಾಸ ಸೃಷ್ಟಿಸಿ ಗಿನ್ನಿಸ್ ಬುಕ್‌ಗೆ ದಾಖಲೆ ನಮೂದಾಗುವಂತೆ ಮಾಡಿ, ಜನರಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮಹತ್ವ ಬಿಂಬಿಸುವAತಹ ಕಾರ್ಯಕ್ರಮ ಮಾಡಲಾಗಿತ್ತು. ಈಗ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೈಕ್ ರ‍್ಯಾಲಿ ಮತ್ತು ಸೈಕಲ್ ರ‍್ಯಾಲಿ ಆಯೋಜಿಸುವ ಮೂಲಕ ಯುವ ಪೀಳೀಗೆಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮವನ್ನು “ನನ್ನ ಮತ ನನ್ನ ಹಕ್ಕು” ಎಂಬ ಶೀರ್ಷಿಕೆಯಡಿ ಆಯೋಜಿಸಲಾಗುತ್ತಿದೆ. ಬೈಕ್ ರ‍್ಯಾಲಿಯು, ಸಂವಿಧಾನ ನೀಡಿರುವ ಪ್ರಜಾಪ್ರಭುತ್ವ ಮಹತ್ವ ಅರಿಯಲು ಮತ್ತು ಮತದಾನ ಹಕ್ಕು, ಮೂಲಭೂತ ಕರ್ತವ್ಯಗಳ ಕುರಿತು ಯುವಪೀಳಿಗೆಗೆ ಜಾಗೃತಿ ಮೂಡಿಸುವುದಾಗಿದೆ ಎಂದು ಹೇಳಿದರು.
ಅದೇ ರೀತಿಯಾಗಿ, ಜಿಲ್ಲಾ ಕೇಂದ್ರದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕೂ ಮುನ್ನ ನಗರದಲ್ಲಿ ಸೈಕಲ್ ರ‍್ಯಾಲಿ ನಡೆಯಲಿದೆ. ಸೈಕಲ್ ರ‍್ಯಾಲಿಗೆ ಬೆಳಿಗ್ಗೆ 08 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಯೇ ಚಾಲನೆ ನೀಡಲಾಗುತ್ತದೆ. ಅಲ್ಲಿಂದ ಸೈಕಲ್ ರ‍್ಯಾಲಿಯು ಗಾಂಧಿ ವೃತ್ತ, ಸಂಗೊಳ್ಳಿರಾಯಣ್ಣ ವೃತ್ತ, ಕನಕವೃತ್ತ ವರೆಗೆ ಸಾಗಿ ಇದೇ ಮಾರ್ಗದಲ್ಲಿ ಹಿಂದಿರುಗಿ ಒನಕೆ ಓಬವ್ವ ವೃತ್ತದ ಬಳಿ ಮುಕ್ತಾಯಗೊಳ್ಳಲಿದ್ದು, ಸಾರ್ವಜನಿಕರು, ವಿವಿಧ ಸಂಘಟನೆಗಳು ಭಾಗವಹಿಸಬಹುದು ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್ ಅವರು ಮಾತನಾಡಿ, ಜಿಲ್ಲೆಯಿಂದ ಹತ್ತು ಜನ ದ್ವಿಚಕ್ರ ವಾಹನ ಸವಾರರನ್ನು ಗುರುತಿಸಿ ಸುರಕ್ಷತಾ ಕ್ರಮದಿಂದ ರ‍್ಯಾಲಿ ಆಯೋಜಿಸಿದ್ದು, ರ‍್ಯಾಲಿಯು ಚಿತ್ರದುರ್ಗದಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಬೆಂಗಳೂರಿನ ವಿಧಾನಸೌಧತ್ತ ಹೊರಟು ಸೆ.15 ರಂದು ಅಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸೇರ್ಪಡೆ ಆಗಲಿದೆ.
ಸೆ. 15 ರಂದು ಸೈಕಲ್ ರ‍್ಯಾಲಿಯನ್ನು ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಸಂಘಟನೆಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ, ವಿವಿಧ ಇಲಾಖೆ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸೇರಿದಂತೆ ಜಿಲ್ಲೆಯ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಹಾಜರಿದ್ದರು.

