ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆ.ಎಸ್.ಇ.ಎ.ಬಿಯ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು ವತಿಯಿಂದ 2025-26ನೇ ಸಾಲಿನ ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕಾಗಿ ಎನ್ಎಂಎಂಎಸ್ ಪರೀಕ್ಷೆಯನ್ನು 2025 ನೇ ಡಿಸೆಂಬರ್ 07 ರಂದು ನಡೆಸಲಾಗುವುದು.
ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ 2025-26 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಪೋಷಕರ ವಾರ್ಷಿಕ ಆದಾಯ ರೂ. 3.50 ಲಕ್ಷದೊಳಗೆ ಇರುವ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಳ್ಳಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಇತರೆ ವಿವರಗಳನ್ನು ಆನ್ಲೈನ್ನಲ್ಲಿ ಲಭ್ಯವಿದ್ದು, ಶಾಲಾ ಮುಖ್ಯ ಶಿಕ್ಷಕರ ಮೂಲಕ ವೆಬ್ ಸೈಟ್ https://kseab.karnataka.gov.in/ ನಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರಂದು ಅಂತಿಮ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23341615 ಗೆ ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಕೆ.ಎಸ್.ಕ್ಯು.ಎ.ಎ.ಸಿ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

