ಮೇಕೆದಾಟು ಯೋಜನೆಗೆ ತಮಿಳುನಾಡು ರಾಜಕೀಯಕ್ಕಾಗಿ ಆಕ್ಷೇಪ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೇಕೆದಾಟು ಯೋಜನೆಗೆ ತಮಿಳುನಾಡು ಏಕೆ ಅಡ್ಡಿಪಡಿಸುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ. ರಾಜಕೀಯಕ್ಕಾಗಿ ಇದನ್ನು  ಆಕ್ಷೇಪಿಸುತ್ತಿದ್ದಾರೆ. ರಾಜ್ಯವು 98 ಟಿಎಂಸಿ ನೀರನ್ನು ತಮಿಳುನಾಡಿಗೆ ಕೊಡಬೇಕಿತ್ತು.

ಆದರೆ ಇಂದಿನವರೆಗೆ 221 ಟಿಎಂಸಿ ನೀರು ತಮಿಳುನಾಡಿಗೆ ಹೋಗಿದೆ. ನಾವು ಕೊಡಬೇಕಿದ್ದ ನೀರಿಗಿಂತಲೂ 122 ಟಿಎಂಸಿ ನೀರು ಹೆಚ್ಚಾಗಿ ಹರಿದು ಹೋಗಿದೆ. ಮಳೆ ಉತ್ತಮವಾಗಿ ಆದರೆ ನೀರನ್ನು ಕೊಟ್ಟೆ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ನಾವು ಅಧಿಕಾರಕ್ಕೆ ಬಂದ ಮೇಲೆ ಎರಡು ವರ್ಷವೂ ಒಳ್ಳೆ ಮಳೆಯಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಈ ವರ್ಷ ವಿದ್ಯುತ್ ಅಭಾವ ಬರಲು ಸಾಧ್ಯವಿಲ್ಲ. ನಮಗೂ ತಮಿಳುನಾಡಿಗೂ ನೀರಿನ ವಿಷಯವಾಗಿ ವಿವಾದವೂ ಬರುವುದಿಲ್ಲ.

ಮೇಕೆದಾಟು ಯೋಜನೆ ಜಾರಿಗೆ ತರಲು ತಮಿಳುನಾಡು ಹಾಗೂ ಕೇಂದ್ರ ಸರ್ಕಾರ ತಕರಾರು ಮಾಡಬಾರದು. ಮೇಕೆದಾಟು ಅಣೆಕಟ್ಟಿನಿಂದ 66 ಟಿಎಂಸಿ ನೀರನ್ನು ಶೇಖರಣೆ ಮಾಡಲು ಸಾಧ್ಯವಾಗುತ್ತದೆ. ಇದರಿಂದ ತಮಿಳುನಾಡು ಹಾಗೂ ಕರ್ನಾಟಕಕ್ಕೂ ಉಪಯೋಗವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";