ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿಜೆಪಿ ಈಗ 14 ಕೋಟಿ ನೋಂದಾಯಿತ ಸದಸ್ಯರನ್ನು ಪೂರ್ಣಗೊಳಿಸಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಸೇವೆ, ಸಂಘಟನೆಯ ಮೂಲಕ ಸಮರ್ಥ ಭಾರತ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷಕ್ಕೆ ಈಗ ದೇಶದ ಜನತೆ ಅದರಲ್ಲೂ ಯುವಜನತೆ ವ್ಯಾಪಕ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಅವರು ಹೇಳಿದರು.

