ಸಾವಿನಲ್ಲೂ ಮಾನವೀಯತೆ ಮೆರೆದ ರಾಜಹಂಸ ಚಾಲಕ ಬಿರಾದಾರ್

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. ಇದರಿಂದಾಗಿ ಭಾರಿ ಅನಾಹುತ ತಪ್ಪಿದೆ.

ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್(50) ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು. ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

- Advertisement - 

ಸಮಯಪ್ರಜ್ಞೆ ಮೆರೆದ ಅವರು ತಕ್ಷಣವೇ ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಸಂಭಾವ್ಯ ಅಪಘಾತ ತಪ್ಪಿದ್ದು, ಪ್ರಯಾಣಿಕರು ಬಚಾವಾಗಿದ್ದಾರೆ.

ಕೂಡಲೇ ಆ್ಯಂಬುಲೆನ್ಸ್​ಗೆ ಕರೆ ಮಾಡಲಾಯಿತಾದರೂ, ಅದು ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್ ಬಿರಾದಾರ್ ಅಸುನೀಗಿದರು. ಪ್ರಾಣ ಹೋಗುವ ನೋವಿನಲ್ಲೂ ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕನಿಗೆ ಜನ ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

- Advertisement - 

 

 

Share This Article
error: Content is protected !!
";