ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಭೈರೇಗೌಡ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಸನಾಂಬೆ ಉತ್ಸವದ ಆಮಂತ್ರಣ ಪತ್ರಿಕೆ ನೀಡಿ, ಪ್ರೀತಿಯಿಂದ ಆಹ್ವಾನಿಸಿದರು.
ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಹಾಸನ ಸಂಸದ ಶ್ರೇಯಸ್ ಪಟೇಲ್, ಜಿಲ್ಲಾಧಿಕಾರಿ ಲತಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಸುಜೀತಾ ಮೊಹಮ್ಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

