ಶ್ರೇಷ್ಠ ಅಭಿಯಂತರ ಪ್ರಶಸ್ತಿಗೆ ಭಾಜನರಾದ ಎಂ.ರವೀಂದ್ರಪ್ಪ 

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ, ನಿವೃತ್ತ ಮುಖ್ಯ ಇಂಜಿನಿಯರ್ ಎಂ.ರವೀಂದ್ರಪ್ಪನವರು ಶ್ರೇಷ್ಠ ಅಭಿಯಂತರರು (ಎಮಿನೆಂಟ್ ಇಂಜಿನಿಯರ್) ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರವೀಂದ್ರಪ್ಪ ಅವರು ಮುಖ್ಯ ಇಂಜಿನಿಯರ್ ಆಗಿ ಕರ್ನಾಟಕ ರಾಜ್ಯದಲ್ಲಿ ಗಣನೀಯ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

- Advertisement - 

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎo.ರವೀಂದ್ರಪ್ಪ ನವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್
, ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ಮತ್ತಿತರರು ಇದ್ದರು.

 

- Advertisement - 

 

Share This Article
error: Content is protected !!
";