ಬೆಳೆ ಹಾನಿ ಜಂಟಿ ಸಮೀಕ್ಷೆ ಮುಗಿದ ಕೂಡಲೇ ಪರಿಹಾರ ವಿತರಣೆ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತಿವೃಷ್ಟಿ ಪೀಡಿತ ಪ್ರದೇಶಗಳ ಜಂಟಿ ಸಮೀಕ್ಷೆ ಮುಗಿಯುತ್ತಿದ್ದಂತೆ, ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಳೆ ಹಾನಿಗೆ ಸಮರ್ಪಕವಾಗಿ ಪರಿಹಾರ ತಲುಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕಲಬುರಗಿ ಪ್ರವಾಸ ವೇಳೆ ಮಂದಿರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಅತಿವೃಷ್ಠಿಯಿಂದ ಸಂಭವಿಸಿದ ಬೆಳೆ ಹಾನಿ ಕುರಿತಂತೆ ಮಾಹಿತಿ ಪಡೆದು, ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಲಹೆ ಸೂಚನೆಗಳನ್ನು ನೀಡಿ ಮಾತನಾಡಿದರು.
ಮಾನವ- ಜಾನುವಾರು ಜೀವ ಹಾನಿಗಳಿಗೆ ಶೇ.
100 ರಷ್ಟು ಪರಿಹಾರ ಒದಗಿಸಿರುವ ರೀತಿಯಲ್ಲೇ ಬೆಳೆ ಹಾನಿಗೂ ಒದಗಿಸಬೇಕು.

- Advertisement - 

ಕಳೆದ ಬಾರಿಗಿಂತ ಈ ಬಾರಿ ಉತ್ತಮ ಮಳೆ ಆಗಿದೆ. ವಾಡಿಕೆಗಿಂತ ಶೇ17 ರಷ್ಟು ಮಳೆ ಹೆಚ್ಚಾಗಿದೆ. 37 ಜನರ ಜೀವ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲಾ ಪರಿಹಾರ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

175 ಜಾನುವಾರುಗಳ ಪ್ರಾಣ ಹಾನಿ ಪ್ರಕರಣಗಳು ವರದಿಯಾಗಿದ್ದು, ಎಲ್ಲದಕ್ಕೂ ಪರಿಹಾರ ನೀಡಲಾಗಿದೆ. ಸಂಪೂರ್ಣ ಮನೆ ಹಾನಿ, ಭಾಗಶಃ ಹಾನಿ ಆಗಿರುವ ಎಲ್ಲಾ ಪ್ರಕರಣಗಳಲ್ಲೂ ಪರಿಹಾರ ನೀಡಲಾಗಿದೆ.

- Advertisement - 

ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿ ಸಂಭವಿಸಿದೆ.‌ನಿರಂತರ ಜೋಳು ಮಳೆ ಇರುವುದರಿಂದ ಬೆಳೆ ಹಾನಿಯ ಸಂಪೂರ್ಣ ಜಂಟಿ ಸಮೀಕ್ಷೆಗೆ ಅಡ್ಡಿ ಆಗುತ್ತಿದೆ. ಹೀಗಾಗಿ ನಿಗಧಿತ ಅವಧಿಯೊಳಗೆ ಜಂಟಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಆದಷ್ಟು ಶೀಘ್ರ ಸಮೀಕ್ಷೆ ಮುಗಿಸಿ, ಪರಿಹಾರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

 

 

Share This Article
error: Content is protected !!
";