ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲಬುರಗಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಸೇವಾ ಸಪ್ತಾಹ ಹಾಗೂ ರಕ್ತದಾನ ಶಿಬಿರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಉದ್ಘಾಟಿಸಿದರು.
ಅತ್ಯಮೂಲ್ಯ ಜೀವ ಉಳಿಸುವ ಶ್ರೇಷ್ಠ ರಕ್ತದಾನದ ಜಾಗೃತಿ ಮೂಡಿಸಿ, ವಿಶ್ವವೇ ನಿಬ್ಬರಗಾಗುವಂತೆ ದೇಶ ಮುನ್ನಡೆಸುತ್ತಾ ವಿಕಸಿತ ಭಾರತದ ಸಂಕಲ್ಪ ಸಾಕಾರಗೊಳ್ಳುತ್ತಿರುವ ಅವರ ಕ್ರಿಯಾಶೀಲ ಸೇವೆ ಹೀಗೆಯೇ ನಿರಂತರ ಮುಂದುವರಿಯಲೆಂದು ವಿಜಯೇಂದ್ರ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಮಟ್ಟಿಮಡು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ್, ಶಶಿಲ್ ನಮೋಶಿ, ಶಾಸಕ ಡಾ ಅವಿನಾಶ್ ಜಾದವ್, ಮಾಜಿ ಸಚಿವ ಬಾಬುರಾವ್ ಚೌಹಾಣ್, ಕಲ್ಬುರ್ಗಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕರಾದ ಅಮರನಾಥ್ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

