ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲೂಕಿನ ಕಡ್ಲೆ ಗುದ್ದು ಗ್ರಾಮದ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ (ಪ.ಜಾತಿ -70)ಗೆ ಉಪವಿಭಾಗಾಧಿಕಾರಿ ಮತ್ತು ಕ್ರೈಸ್ ವಸತಿ ಶಾಲೆಗಳ ಆಡಳಿತಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ರವರು ಭೇಟಿ ನೀಡಿ ಪರಿಶೀಲಿಸಿದರು.
ವಸತಿ ಶಾಲೆ ನಿರ್ವಹಣೆ, ಶೈಕ್ಷಣಿಕ ಚಟುವಟಿಕೆಗಳ ವ್ಯವಸ್ಥೆ ಕುರಿತು ಶಾಲೆ ಪ್ರಾಂಶುಪಾಲರು, ನಿಲಯ ಪಾಲಕರು, ಇತರೆ ಸಿಬ್ಬಂದಿಗಳ ಕಾರ್ಯ ಚಟುವಟಿಕೆಗಳ ಕುರಿತು ಪರಿಶೀಲಿಸಿದರು.
ಇತ್ತೀಚಿಗೆ ಗೂಗಲ್ ಮೀಟ್ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಕ್ರೈಸ್ ವಸತಿ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಚಿತ್ರಕಲಾ ಶಿಕ್ಷಕರಿಗೆ ನೀಡಲಾಗಿದ್ದ ಸೂಚನೆಗಳನ್ನು ಅನುಷ್ಠಾನ ಮಾಡಿರುವ ದಾಖಲೆಗಳನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಮಾರ್ಗದರ್ಶನ ಮಾಡಿದರು.
ಭೋಜನ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಅನ್ನದ ಮಹತ್ವ ಕುರಿತು ಅರಿವು ಮೂಡಿಸಿದರು.
ದಾಸ್ತಾನು ಕೊಠಡಿ ಪರಿಶೀಲಿಸಿದ ನಂತರ ವಿದ್ಯಾರ್ಥಿಗಳೊಂದಿಗೆ ಮತ್ತು ಸಿಬ್ಬಂದಿಗಳೊಂದಿಗೆ ಮಧ್ಯಾಹ್ನದ ಊಟ ಸವಿದು ವಸತಿ ಶಾಲೆಯ ನಿರ್ವಹಣೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರು, ಚಿತ್ರದುರ್ಗ ಜಿಲ್ಲೆಯ ಕ್ರೈಸ್ ಶಾಲೆಗಳ ಜಿಲ್ಲಾ ಸಮನ್ವಯಾಧಿಕಾರಿ ಆರ್.ರಮೇಶ್ ಮತ್ತು ಸಿಬ್ಬಂದಿಗಳು ಹಾಜರಿದ್ದರು.

