ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನ ಪ್ರಭಾ, ಮಹಿಳಾ ಉದ್ಯಮಿ ಜ್ಯೋತಿ ಬಾಲಕೃಷ್ಣ ಸೇರಿದಂತೆ ಉಬುಂಟು ಕನ್ಸೋರ್ಟಿಯಂನ ತಂಡದೊಂದಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಡಿಸಿಎಂ ಅವರನ್ನು ಭೇಟಿಯಾದರು.
ನವೆಂಬರ್ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಟುಗೆದರ್ ವಿ ಗ್ರೋ 2025 ಎಂಬ ಪ್ರಮುಖ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಆಹ್ವಾನಿಸಲಾಯಿತು.
ಭಾರತದಾದ್ಯಂತ ಮಹಿಳಾ ಉದ್ಯಮಿಗಳನ್ನು ಒಟ್ಟುಗೂಡಿಸಿದ್ದಕ್ಕಾಗಿ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ಬಲವಾದ ವೇದಿಕೆಯನ್ನು ನಿರ್ಮಿಸಿದ್ದಕ್ಕಾಗಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಅಭಿನಂದನೆಗಳನ್ನು ಸಲ್ಲಿಸಿದರು.

ಸಬಲೀಕರಣ ಮತ್ತು ಸಹಯೋಗದ ಮನೋಭಾವವನ್ನು ಆಚರಿಸುವಲ್ಲಿ ಅವರೊಂದಿಗೆ ಸೇರಲು ಎದುರು ನೋಡುತ್ತಿದ್ದೇನೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

