ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಕ್ಷಣ ಇಲಾಖೆ 18 ದಿನ ಸರ್ಕಾರಿ ಶಾಲೆಗಳಿಗೆ ಹಬ್ಬದ ರಜೆ ಘೋಷಣೆ ಮಾಡಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದ್ದು, ಸೆ. 20 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರಿ ಶಾಲೆಗಳಿಗೆ ಒಟ್ಟು 18 ದಿನ ಹಬ್ಬದ ರಜೆ ಘೋಷಿಸಿದೆ.
ಆದರೆ ಕಡ್ಡಾಯವಾಗಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮಗಳಿಗೆ ಹಾಜರಾಗುವಂತೆ ಸೂಚಿಸಿ ಆದೇಶಿಸಲಾಗಿದೆ.

