ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಭಿವೃದ್ಧಿಗೆ ದುಡ್ಡಿಲ್ಲ, ರಾಜ್ಯದ ಪ್ರಗತಿಗೆ ಯಾವುದೇ ದೂರದೃಷ್ಟಿ ಇಲ್ಲ, ಹೂಡಿಕೆದಾರರನ್ನು, ಉದ್ಯಮಿಗಳನ್ನು ಆಕರ್ಷಿಸುವ, ಹಿಡಿದಿಟ್ಟುಕೊಳ್ಳುವ ಆಸಕ್ತಿ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಇವ್ಯಾವುದೂ ಇಲ್ಲದೆ ಹಿಂದೆಂದೂ ಕಂಡರಿಯದ ದುರಾಡಳಿತ, ಭ್ರಷ್ಟಾಚಾರದ ಕೂಪದಲ್ಲಿ ರಾಜ್ಯವನ್ನ ಮುಳುಗಿಸಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಮುಜುಗರಕ್ಕೊಳಗಾದಾಗಲೆಲ್ಲ ಜನರ ದಿಕ್ಕು ತಪ್ಪಿಸಲು, ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ ಎಂಬ ಮೆಗಾ ಸೀರಿಯಲ್ ನ ಒಂದೊಂದೇ ಸಂಚಿಕೆ ಹೊರಬಿಡುವ ನಾಟಕ ಮಾಡುತ್ತಿದೆ.
ಸಿಎಂ ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಈ ಭಂಡ ಬಾಳು. ನೀವು ಹೇಳಿದ್ದನ್ನ ನಿಮ್ಮ ಸಂಪುಟ ಸದಸ್ಯರೂ ಒಪ್ಪುವುದಿಲ್ಲ, ಶಾಸಕರೂ ಒಪ್ಪುವುದಿಲ್ಲ, ಹೈಕಮಾಂಡ್ ಅಂತೂ ನಿಮ್ಮ ಮಾತಿಗೆ ಮೊದಲೇ ಕಿಮ್ಮತ್ತು ಕೊಡುತ್ತಿಲ್ಲ. ಸಾಕು ಈ ಭಂಡ ಬಾಳು. ರಾಜೀನಾಮೆ ಕೊಟ್ಟು ರಾಜ್ಯವನ್ನು ಉಳಿಸಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

