ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ಭಗವಂತನಿಗೆ ಸಮ- ಸಚಿವ ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಡಿ.ಸುಧಾಕರ್ ಕಾರ್ಯಕ್ರಮವನ್ನು ಪಂಜಿನ ಮೆರವಣಿಗೆ ಮೂಲಕ ಉದ್ಘಾಟಿಸಿದರು.

ಪೌರ ಕಾರ್ಮಿಕರ ನಿಸ್ವಾರ್ಥ ಸೇವೆ ಭಗವಂತನ ಪಾದಗಳಿಗೆ ಮುಟ್ಟಿದೆ, ಪೌರ ಕಾರ್ಮಿಕರಲ್ಲಿ ನಾವು ಭಗವಂತನನ್ನು ಕಾಣಬೇಕು ಹಾಗೇ ಸ್ಮರಿಸಿಬೇಕು ಎಂದು ಸಚಿವ ಸುಧಾಕರ್ ಹೇಳಿದರು.

- Advertisement - 

ಪೌರ ಕಾರ್ಮಿಕರು ಸ್ವಚ್ಛತೆಗೆ ಆದ್ಯತೆ ನೀಡುವುದರ ಜೊತೆಯಲ್ಲಿ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳುವ ಮೂಲಕ ಸದಾ ಕ್ರಿಯಾಶೀಲವಾಗಿರಬೇಕು ಎಂದು ಸಚಿವ ಸುಧಾಕರ್ ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಸಚಿವರು ಪೌರಕಾರ್ಮಿಕರಿಗೆ ಸಮವಸ್ತ್ರಗಳನ್ನು ವಿತರಣೆ ಮಾಡಿ ಪೌರಕಾರ್ಮಿಕರು ನಗರ ಶುಚಿಗೊಳಿಸಲು ಹೆಚ್ಚಿನ ಶಕ್ತಿ ನೀಡಲಿ ಎಂದು ಕೋರಿಕೊಂಡರು. 

- Advertisement - 

ನಗರಸಭೆ ಅಧ್ಯಕ್ಷ ವೆಂಕಟೇಶ್, ಪೌರಾಯುಕ್ತ ವಾಸೀಂ ಸೇರಿದಂತೆ ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಸದಸ್ಯರುಗಳು,  ಕಛೇರಿಯ ನೌಕರರುಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಾಹನ ಚಾಲಕರು ಮತ್ತು ನೀರು ಸರಬರಾಜು ಸಿಬ್ಬಂದಿಗಳು ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು  ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

 

 

Share This Article
error: Content is protected !!
";