ಚಂದ್ರವಳ್ಳಿ ನ್ಯೂಸ್, ತುಮಕೂರು:
ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿದ ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕಡಪಲ ಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ತನ್ನ ಒಂದೂವರೇ ವರ್ಷ ಹಾಗೂ ನಾಲ್ಕು ವರ್ಷದ ಇಬ್ಬರು ಮಕ್ಕಳ ಕತ್ತು ಕೊಯ್ದು ಕೊಲೆ ಮಾಡಿದ ನಂತರ ತಾಯಿ ಸರಿತಾ(25), ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಹಿಳೆಯ ಪತಿ ಸಂತೋಷ್, ಲಗೇಜ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿವೈಎಸ್ಪಿ ಭೇಟಿ:
ತಾಯಿ, ಪುಟ್ಟ ಮಕ್ಕಳು ಮೃತಪಟ್ಟ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಹಿತಿ ತಿಳಿದು ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಹಾಗೂ ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಪಾವಗಡ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

