ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿ ಆದೇಶಿಸಿದೆ.
ಬ್ರಾಹ್ಮಣ ಮಹಾಸಭಾ, ರಾಜ್ಯ ಒಕ್ಕಲಿಗರ ಸಂಘ, ಹಿರಿಯ ವಕೀಲ ಕೆ.ಎನ್. ಸುಬ್ಬಾರೆಡ್ಡಿ ಮತ್ತಿತರರು ಜಾತಿ ಸಮೀಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಜೋಶಿ ಅವರಿದ್ದ ನ್ಯಾಯಪೀಠ ಮುಂದೂಡಿತು.
ಅರ್ಜಿದಾರರು ಮತ್ತು ಸರ್ಕಾರದ ಪರವಾಗಿ ಅರ್ಜಿಗೆ ಸಂಬಂಧಿಸಿದಂತೆ, ಸುಮಾರು ಎರಡು ತಾಸು ವಿಚಾರಣೆ ನಡೆಸಿದ ನ್ಯಾಯಪೀಠ, ಮುಂದಿನ ವಿಚಾರಣೆಯನ್ನು ಬುಧವಾರಕ್ಕೆ ನಿಗದಿ ಪಡಿಸಿ ಆದೇಶಿಸಿತು.

