ಆದಾಯ ತೆರಿಗೆ ಸಲ್ಲಿಕೆ ಕುರಿತು ಜಾಗೃತಿ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆದಾಯ ತೆರಿಗೆ ನಿಬಂಧನೆಗಳು ಹಾಗೂ ತೆರಿಗೆ ಸಲ್ಲಿಕೆ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೆ.25 ರಂದು ಬೆಳಿಗ್ಗೆ 10:30ಕ್ಕೆ ಆದಾಯ ತೆರಿಗೆ ಇಲಾಖೆ ವತಿಯಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಂಗಳೂರು ವಿಭಾಗದ ಆದಾಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಪಂಕಜ್ ದ್ವಿವೇದಿ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು. ದಾವಣಗೆರೆ ಚಾರ್ಟ್‍ಟ್ ಅಕೌಂಟೆಂಟ್ ಅಸೋಶಿಯೇಷನ್ ಉಪಾಧ್ಯಕ್ಷ ಮಧುಪ್ರಸಾದ್.ಕೆ ಅಧ್ಯಕ್ಷತೆ ವಹಿಸುವರು.
ಚಿತ್ರದುರ್ಗ ಟ್ಯಾಕ್ಸ್ ಪ್ರಾಕ್ಟೀಷನರ್ ಅಸೋಸಿಯೇಷನ್ ಅಧ್ಯಕ್ಷ ಎಸ್.ಗೋವಿಂದ ರೆಡ್ಡಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

