ಮಹಾನಗರ ಪಾಲಿಕೆಗಳ ಚುನಾವಣೆ ನಂತರ ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ

News Desk
- Advertisement -  - Advertisement - 

ಮಹಾನಗರ ಪಾಲಿಕೆಗಳ ಚುನಾವಣೆ ನಂತರ ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಿಬಿಎ ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆ ನಡೆಯಲಿದ್ದು, ಆ ಚುನಾವಣೆ ಮುಗಿಯುವವರೆಗೆ ಮತದಾರರ ಸಮಗ್ರ ಪಟ್ಟಿ ಪರಿಷ್ಕರಣೆ (SIR)  ಮುಂದೂಡುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ಮನವಿ ಮಾಡಿದೆ.

ರಾಜ್ಯ ಚುನಾವಣಾ ಆಯೋಗ ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು ಸ್ಥಳೀಯಸಂಸ್ಥೆ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಕೋರಿದ್ದಾರೆ.

- Advertisement - 

ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ಮಾಧ್ಯಮಗಳೊಂದಿಗೆ ಮಾತನಾಡಿ, ಕೇಂದ್ರ ಚುನಾವಣಾ ಮುಖ್ಯ ಆಯುಕ್ತರಿಗೆ ಮಂಗಳವಾರ ಇ-ಮೇಲ್ ಕಳುಹಿಸಿದ್ದೇನೆ. ಬೆಂಗಳೂರು ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆ ನಡೆಸಬೇಕಿದೆ. ನ.1ರಿಂದ ಜಿಬಿಎ ಚುನಾವಣೆ ಸಂಬಂಧ ಕೆಲಸ ಶುರು ಮಾಡಬೇಕು. ಈ ಸಮಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡೋದು ಸರಿಯಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು ಆ ಸಮೀಕ್ಷೆ ಕಾರ್ಯಕ್ಕೆ ಮ್ಯಾನ್ ಪವರ್ ನೀಡಲಾಗಿದೆ. ಇದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗಳಿಗೆ ಮ್ಯಾನ್ ಪವರ್ ಸಮಸ್ಯೆ ಆಗಲಿದೆ. ಹಾಗಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮ್ಯಾನ್ ಪವರ್ ಇಲ್ಲದೆ ಕಷ್ಟ ಆಗಲಿದೆ ಎಂದು ತಿಳಿಸಿದರು.

- Advertisement - 

ಸ್ಥಳೀಯ ಸಂಸ್ಥೆ ಚುನಾವಣೆಗೆ ಬ್ಯಾಲೆಟ್​ ಪೇಪರ್ ಬಳಕೆ ಮಾಡುವ ಕುರಿತು  ಸರ್ಕಾರ ನಿರ್ಧಾರ ಕೈಗೊಂಡಿದೆ. ಇದರ ಬಗ್ಗೆಯೂ ಆಯೋಗವು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ. ಹೀಗಾಗಿ ಮುಂದೂಡಿಕೆ ಮಾಡಿ ಅಂತ ಪತ್ರದ ಮೂಲಕ ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಸುಪ್ರಿಂಕೋರ್ಟ್​ಗೆ ನ.3ರಂದು ಕಂಪ್ಲಾಯನ್ಸ್ ಅಫಿಡವಿಟ್ ನೀಡಬೇಕು. ಜಿಬಿಎ ಡಿಲಿಮಿಟೇಷನ್ ವರದಿಯನ್ನ ಸರ್ಕಾರ ಕೊಡಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್.ಸಂಗ್ರೇಶಿ ತಿಳಿಸಿದರು.

 

 

 

Share This Article
error: Content is protected !!
";