ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಸ್ನೇಹಿತರೊಂದಿಗೆ ನಿನ್ನೆ ಕೆರೆಯಲ್ಲಿ ಈಜಾಡಲು ತೆರಳಿದ್ದ ಬಾಲಕ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಈಜಾಡಲು ತೆರಳಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಕಲ್ಲುಕುಂಟೆ ಕೆರೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಕೊಲ್ಕತ್ತಾ ಮೂಲದ ಸೃಂಜಯ್ ಸಿಂಗ್ (17) ಎಂದು ಗುರುತಿಸಲಾಗಿದೆ.
ಮೃತ ವಿದ್ಯಾರ್ಥಿ ಕಲ್ಲುಕುಂಟೆ ಸಮೀಪದ ಕ್ರಿಯೇಟಿವ್ ಸ್ಕೂಲ್‌ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ನಿನ್ನೆ ಕಾಲೇಜಿನ ಹಲವು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ತೆರಳಿದ್ದರು, ಇಂದು ಸೃಂಜಯ್ ಸಿಂಗ್ ಪತ್ತೆಯಾಗಿರಬಹುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕೊಲ್ಕತ್ತಾ ಮೂಲದವರಾದ ಮೃತ ಬಾಲಕನ ತಂದೆ ಮತ್ತು ತಾಯಿ ಇಬ್ಬರು ಕ್ರಿಯೇಟಿವ್ ಸ್ಕೂಲ್‌ನಲ್ಲಿಯೇ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಾಲಕನ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

