ಚಂದ್ರವಳ್ಳಿ ನ್ಯೂಸ್, ನಾಗಮಂಗಲ:
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಚುಂಚಶ್ರೀ ಪ್ರಶಸ್ತಿ ಜಾನಪದ ಕ್ಷೇತ್ರದ ಸಾಧಕ ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಸೇರಿದಂತೆ ಐವರು ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಮಾಡಿತು.
ಈ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 24, 2025 ರಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿ ಅವರು ಉದ್ಘಾಟಿಸಿದ 46ನೇ ರಾಜ್ಯಮಟ್ಟದ ಶ್ರೀ ಕಾಲಭೈರವೇಶ್ವರ ಜಾನಪದ ಕಲಾಮೇಳದ ಸಮಾರಂಭ ಉದ್ಘಾಟಿಸಿದ ಬಳಿಕ ಸಾಧಕರಿಗೆ ಚುಂಚಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹರಿಯಬ್ಬೆ ಜಿ.ಡಿ ತಿಮ್ಮಯ್ಯ ಅವರಿಗೆ ಚುಂಚಶ್ರೀ ಪ್ರಶಸ್ತಿ ಜೊತೆಯಲ್ಲಿ 50 ಸಾವಿರ ರೂ.ನಗದು ಸೇರಿದಂತೆ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಿದರು.

