ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರಿದಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ವಾಲ್ಮೀಕಿ ನಗರದಲ್ಲಿ ಕುಡಿದ ಮತ್ತಿನಲ್ಲಿ ಲಾಂಗ್ ಬೀಸಿ 20 ವಾಹನಗಳ ಗ್ಲಾಸ್ ಪುಡಿಗಟ್ಟಿರುವ ಘಟನೆ ಜರುಗಿದ್ದು ಅದು ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಕಿಡಿಗೇಡಿಗಳು ರಸ್ತೆ ಬದಿ ನಿಲುಗಡೆ ಮಾಡಿದ್ದ ವಾಹನಗಳ ಮೇಲೆ ಎರ್ರಾಬಿರ್ರಿ ಲಾಂಗ್ ಬೀಸಿ ವಾಹನಗಳಿಗೆ ಹಾನಿ ಮಾಡಿದ್ದಾರೆ. ಅಲ್ಲದೆ, ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿ ಐದಾರು ವಾಹನಗಳ ಗ್ಲಾಸ್ಗಳನ್ನು ಒಡೆದು ಹಾಕಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದೆ.

