ಯೋಜನಾ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ 11 ಸದಸ್ಯರ ಆಯ್ಕೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರ ಸ್ಥಳೀಯ ಕ್ಷೇತ್ರದಲ್ಲಿ ಒಟ್ಟು 168 ಮತದಾರರು ಇದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚುನಾವಣೆ ಕಾರ್ಯಗಳು ನಡೆಯಲಿವೆ.

ಅಕ್ಟೋಬರ್ 14 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಸಲ್ಲಿಸಲು ಕಾಲ ನಿಗದಿಪಡಿಸಲಾಗಿದೆ. ಅಕ್ಟೋಬರ್ 18 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.
ಅಕ್ಟೋಬರ್ 24 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಅಕ್ಟೋಬರ್ 28 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಬಹುದು.

- Advertisement - 

ಅಕ್ಟೋಬರ್ 29 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 4 ಗಂಟೆಯ ರವರೆಗೆ ಚುನಾವಣೆಗೆ ಮತದಾನ ನಡೆಯಲಿದೆ. ಅಂದು ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆಸಲಾಗುವುದು. ಬಳಿಕ ಫಲಿತಾಂಶ ಘೊಷಿಸಿ ಚುನಾವಣೆ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";