ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ-ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಹುಬ್ಬಳ್ಳಿ – ಧಾರವಾಡ, ಗದಗ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಬುಧವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

- Advertisement - 

ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಸ್ವಾಗತ-
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ಹೇಳಿರುವುದನ್ನು ಸ್ವಾಗತಿಸುತ್ತೇನೆ. ಆದರೆ 2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ
, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ ಸುಪ್ರೀಂಕೋರ್ಟ್ ನ ಬಳಿ ಧಾವಿಸಿ, ಬಳಿಕ ಕಾನೂನಾತ್ಮಕ ಹೋರಾಟದಿಂದ ಪರಿಹಾರ ತೆಗೆದುಕೊಳ್ಳುವಂತಾಯಿತು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಸಲ್ಲಿಸಲಿದೆ ಎಂದು ಸಿಎಂ ತಿಳಿಸಿದರು.

“ಬಿಜೆಪಿಯವರು ಯಥಾಸ್ಥಿತಿ ವಾದಿಗಳು”-
ನಾವು ಮಾಡುತ್ತಿರುವ ಸಮೀಕ್ಷೆ ಸಾಮಾಜಿಕ
, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ತಿಳಿಸಿದಂತೆ ಅಸಮಾನತೆ ಹೋಗಲಾಡಿಸಲು ದುರ್ಬಲರು ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

 

Share This Article
error: Content is protected !!
";