ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಾಪು ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಗಾಂಧೀಜಿಯವರ ತ್ಯಾಗ
, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮದವರ ಜೊತೆ ಮಾತನಾಡಿದರು.

- Advertisement - 

ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು, ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿಗಳಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀ ಕೂಡ ಒಬ್ಬರು.

ಈ ಮಹಾನ್ ಚೇತನಗಳ ಜಯಂತಿಯ ಜೊತೆ ನಾಡಿನೆಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟಿದೆ. ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೂಡ ಕೋರುತ್ತೇನೆ ಎಂದು ಸಿಎಂ ತಿಳಿಸಿದರು.

- Advertisement - 

 

 

Share This Article
error: Content is protected !!
";