ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಯ ಜೆಪಿ ಭವನದಲ್ಲಿ ದಸರಾ ಮಹೋತ್ಸವ ಹಾಗೂ ವಿಜಯದಶಮಿ ಹಬ್ಬ ಮತ್ತು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿ ಹಾಗೂ
ಮಾಜಿ ಪ್ರಧಾನಿ ಮಂತ್ರಿಗಳಾದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121ನೇ ಜಯಂತಿಯನ್ನು ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರವರ ನೇತೃತ್ವದಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ ಎಸ್ ಸತ್ಯ, ಹಿರಿಯ ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತರೊಂದಿಗೆ ಬಸವನಗುಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಟಿ.ತಿಮ್ಮೇಗೌಡರನ್ನು ಸನ್ಮಾನಿಸಿ, ಗೌರವಿಸಲಾಯಿತು.

