ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ತರಬೇತಿಯು ಪದವೀಧರರಿಗೆ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. ಆಸಕ್ತರು ಅಕ್ಟೋಬರ್ 10 ರೊಳಗಾಗಿ ಮೈಸೂರಿನಲ್ಲಿರುವ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ತಮ್ಮ ಹೆಸರನ್ನು ಬೆಳಿಗ್ಗೆ 10 ರಿಂದ ಸಂಜೆ 4:00 ಗಂಟೆಯೊಳಗಾಗಿ ನೋಂದಾಯಿಸಿಕೊಳ್ಳಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಎಸ್.ಕೆ. ನವೀನ್ಕುಮಾರ್ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ : 0821-2515944 / 9964760090 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

