ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಅವರು ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ, ರೈತರಿಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸಂಸದ ರಮೇಶ್ ಜಿಗಜಿಣಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಪರಿಷತ್ಸದಸ್ಯ ಸಿ.ಟಿ. ರವಿ, ಶಾಸಕಿ ಶಶಿಕಲಾ ಜೊಲ್ಲೆ, ಸಿದ್ದು ಸವದಿ, ವಿಠ್ಠಲ್ ಹಲಗೇಕರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್,
ಮಾಜಿ ಶಾಸಕ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ್ ಕವಟಗಿಮಠ, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ರೈತರು ಉಪಸ್ಥಿತರಿದ್ದರು.

