ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯೂರು ಹಾಗೂ ಅರಣ್ಯ ಇಲಾಖೆ ಹಿರಿಯೂರು ಇವರ ಸಹಯೋಗದಲ್ಲಿ ಹಾವು ಮತ್ತು ನಾವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವುದರ ಮೂಲಕ ಉದ್ಘಾಟಿಸಲಾಯಿತು.
ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಎನ್. ಬಿ.ಗಟ್ಟಿ ಅವರು ಪ್ರಾಸ್ತಾವಿಕ ನುಡಿಗಳನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ಹಿರಿಯೂರು ತಾಲೂಕಿನ ನಂದಿಹಳ್ಳಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿ, ಸಂಪನ್ಮೂಲ ವ್ಯಕ್ತಿಯಾಗಿ ಬಂದ ಕಾರ್ತಿಕ್ ರವರು ಹಾವು ಮತ್ತು ನಾವು ಈ ಶೀರ್ಷಿಕೆಯ ಅಡಿಯಲ್ಲಿ ಸುಧೀರ್ಘವಾದ ಮಾಹಿತಿ ನೀಡುತ್ತಾ ಹಾವುಗಳನ್ನು ನಾವು ಹೇಗೆ ರಕ್ಷಣೆ ಮಾಡಬೇಕು ಮತ್ತು ಹಾವುಗಳಿಂದ ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂಬುದರ ವಿಚಾರವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.
ಅರಣ್ಯ ಇಲಾಖೆ ಅಧಿಕಾರಿ ಬಾಬು ಎಸ್ ಮಾತನಾಡಿ ಕಾಡು ಬೆಳೆದರೆ ನಾಡು ಉಳಿಯುತ್ತದೆ ಎಂಬ ವಿಚಾರ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆ ಅಧಿಕಾರಿ ವಸಂತ್ ಕುಮಾರ್ ಅವರು ವಿದ್ಯಾರ್ಥಿಗಳು ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.
ಡಾ. ಧನಂಜಯ ಎಸ್ ಜಿ ರವರು ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಕಾಲೇಜಿನ ಅಧ್ಯಾಪಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಂತಿಮ ವರ್ಷದ ವಿದ್ಯಾರ್ಥಿನಿ ಚಂದನ ಪ್ರಾರ್ಥಿಸಿದರು. ನೀತು ನಾಯಕ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

